Tuesday, October 6, 2026
spot_imgspot_img
spot_imgspot_img

ದೆಹಲಿ: AI ನಕಲಿ ವಿಡಿಯೋ ಸೃಷ್ಟಿಸಿ ಹಂಚಿಕೆ ಪ್ರಕರಣ , ವ್ಯಕ್ತಿ ಬಂಧನ

- Advertisement -
- Advertisement -

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡುತ್ತಿರುವಂತೆ ತೋರಿಸುವ ನಕಲಿ AI ವಿಡಿಯೋ ಹಂಚಿಕೊಂಡ ಆರೋಪದ ಮೇಲೆ ದೆಹಲಿ ಪೊಲೀಸರು 24 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಯ ಮೇಲೆ ಹಲ್ಲೆ ನಡೆಸುತ್ತಿರುವಂತೆ ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.

ಈ ವಿಡಿಯೋದಲ್ಲಿ ಪೊಲೀಸ್ ಅಧಿಕಾರಿ ಮಹಿಳಾ ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿರುವಂತೆ ತೋರಿಸಲಾಗಿತ್ತು. ಆದರೆ, ಈ ವಿಡಿಯೋ AI ಬಳಸಿ ಸಿದ್ಧಪಡಿಸಿದ ನಕಲಿ ವಿಡಿಯೋ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 24 ವರ್ಷದ ನದೀಮ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದಾರೆ. ತನಿಖೆ ವೇಳೆ ವೈರಲ್ ವಿಡಿಯೋವನ್ನು ಎಂಬ ಸಾಮಾಜಿಕ ಮಾಧ್ಯಮ ಖಾತೆಯಿಂದ ಹಂಚಿಕೊಳ್ಳಲಾಗಿದೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ.

ಹರಿಯಾಣ ಮೂಲದ ನದೀಮ್ ಅಹ್ಮದ್ ತಾನು ಸ್ವತಂತ್ರ ಪತ್ರಕರ್ತ ಎಂದು ಹೇಳಿಕೊಂಡಿದ್ದಾನೆ. ಪ್ರತಿಭಟನೆಯ ಸಮಯದಲ್ಲಿ ಈ ಸಾಮಾಜಿಕ ಮಾಧ್ಯಮ ಚಾನೆಲ್ ಆರಂಭಿಸಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅಕ್ಟೋಬರ್ 3ರಂದು AI ಪರಿಕರಗಳನ್ನು ಬಳಸಿ ನಕಲಿ ರೀಲ್ಸ್ ಸಿದ್ಧಪಡಿಸಲಾಗಿತ್ತು. ಬಳಿಕ ಅಕ್ಟೋಬರ್ 4ರಂದು ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಅಪರಾಧ ವಿಭಾಗಕ್ಕೆ ವಹಿಸಲಾಗಿದೆ. ಸದ್ಯ ಅಪರಾಧ ವಿಭಾಗ ಈ ಪ್ರಕರಣದ ತನಿಖೆ ನಡೆಸುತ್ತಿದೆ.

- Advertisement -

Related news

error: Content is protected !!