Tuesday, October 6, 2026
spot_imgspot_img
spot_imgspot_img

ಕೊಡಂಗಾಯಿಯಲ್ಲಿ ಅ.11ರಂದು ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ವಿಟ್ಲ: ಶ್ರೀ ಬಿ. ರಮಾನಾಥ ರೈ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅ.11ರಂದು ಕೊಡಂಗಾಯಿಯಲ್ಲಿ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಅವಶ್ಯ ಫೌಂಡೇಶನ್, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ಕಂಕನಾಡಿ, ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಹಾಗೂ ಶ್ರೀ ಬಿ. ರಮಾನಾಥ ರೈ ಹುಟ್ಟುಹಬ್ಬ ಆಚರಣಾ ಸಮಿತಿ ದ.ಕ. ಜಿಲ್ಲೆ, ಶ್ರೀ ಬಿ. ರಮಾನಾಥ ರೈ ಅಭಿಮಾನಿ ಬಳಗ ವಿಟ್ಲ ಪಡ್ನೂರು ಮತ್ತು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ.ಅ.11ರಂದು ಭಾನುವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ಕೊಡಂಗಾಯಿ ಪಂಚಾಯತ್ ಸಭಾಭವನದಲ್ಲಿ ಶಿಬಿರ ನಡೆಯಲಿದೆ

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಚರ್ಮರೋಗ, ಕಣ್ಣಿನ ತಪಾಸಣೆ, ಮೂಳೆ ಮತ್ತು ಕೀಲುಗಳ ತಪಾಸಣೆ, ರಕ್ತದೊತ್ತಡ, ಮಧುಮೇಹ ಹಾಗೂ ಕಿವಿ-ಮೂಗು-ಗಂಟಲು (ENT) ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುವುದು. ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗುವುದು.ಇದೇ ಸಂದರ್ಭದಲ್ಲಿ ವಿಟ್ಲ ಪಡೂರು ಗ್ರಾಮದ ಮೂವರು ಬಡ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರ ವಿತರಣೆ ಹಾಗೂ ಅಡಿಕೆ ಮತ್ತು ತೆಂಗಿನ ಮರ ಹತ್ತುವ ಕೂಲಿ ಕಾರ್ಮಿಕರಿಗೆ ಸುಮಾರು ₹15 ಲಕ್ಷ ಮೊತ್ತದ ಉಚಿತ ಜೀವ ವಿಮೆ ನೀಡಲಾಗುವುದು. ಈ ಸೌಲಭ್ಯ ವಿಟ್ಲ ಪಡೂರು ಗ್ರಾಮದವರಿಗೆ ಮಾತ್ರ ಅನ್ವಯವಾಗಲಿದೆ.

ಜೂನಿಯರ್ ವೈಟ್ ಲಿಫ್ಟಿಂಗ್‌ನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಬಿ. ಪ್ರಧಮ್ ರಾಘವ ಗೌಡ ಬನ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿ ಎರಡು ಚಿನ್ನದ ಪದಕ ಪಡೆದ ಕು. ಸಲೀಲ ಅಬ್ದುಲ್ಲಾ ಮುಸ್ಲಿಯಾರ್ ಕಡಂಬು ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ: 8088899199, 7259446888, 9741631475.

- Advertisement -

Related news

error: Content is protected !!