- Advertisement -
- Advertisement -
ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.

ಉಪ್ಪಿನಂಗಡಿ ಠಾಣಾ ಪಿ.ಸಿ.ಆರ್. ಸಂಖ್ಯೆ 01/18ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಎಂಬಾತನ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ-2295 ಪ್ರವೀಣ್ ಹಾಗೂ ಪಿಸಿ ಲಿಂಗರಾಜು ಅವರು ಅಕ್ಟೋಬರ್ 6ರಂದು ಹಾಸನದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.


ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

- Advertisement -








