- Advertisement -
- Advertisement -

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಅ.6ರಂದು ಮಧ್ಯಾಹ್ನ ಕಲ್ಮಡ್ಕ ಗ್ರಾಮದ ಮುಚ್ಚಿಲದಲ್ಲಿ ನಡೆದಿದೆ.ಶಾಸಕರು KA 18 MA 4731 ನೋಂದಣಿಯ ಇನ್ನೋವಾ ಕಾರಿನಲ್ಲಿ ಪಂಜ ಕಡೆಯಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ವೇಳೆ, ಮುಚ್ಚಿಲ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದಕ್ಕೆ ಸಾಗುತ್ತಿದ್ದ KA 12 MC 3325 ನೋಂದಣಿಯ ಕಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬಳಿಕ ಎರಡೂ ಕಡೆಯವರು ಪರಸ್ಪರ ಮಾತುಕತೆ ನಡೆಸಿ ವಿಚಾರವನ್ನು ಇತ್ಯರ್ಥಪಡಿಸಿಕೊಂಡಿದ್ದು, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬಳಿಕ ಎರಡೂ ಕಡೆಯವರು ಪರಸ್ಪರ ಮಾತುಕತೆ ನಡೆಸಿ ವಿಚಾರವನ್ನು ಇತ್ಯರ್ಥಪಡಿಸಿಕೊಂಡಿದ್ದು, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
- Advertisement -








