Wednesday, October 7, 2026
spot_imgspot_img
spot_imgspot_img

ಜಯನಗರದಲ್ಲಿ ನಮೂನೆ-7 ದುರ್ಬಳಕೆ ಆರೋಪ -ಐವರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ ಆರೋಪದಡಿ ಐವರು ಆರೋಪಿಗಳ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.ಕ್ಷೇತ್ರದ 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗದ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಬಿಜೆಪಿ ಮುಖಂಡರಾದ ರಾಮಕೃಷ್ಣ ಯೋಗೇಶ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!