Thursday, October 8, 2026
spot_imgspot_img
spot_imgspot_img

ಕರ್ನಾಟಕದಲ್ಲಿ ಹಾಫ್ ಹೆಲ್ಕೆಟ್ ಬಳಕೆ, ತಯಾರಿಕೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿಷೇಧ

- Advertisement -
- Advertisement -

ಬೆಂಗಳೂರು : ರಸ್ತೆ ಅಪಘಾತ ತಡೆಗಟ್ಟಲು ಹಾಗೂ ಸವಾರರಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡುವ ನಿಟ್ಟಿನಲ್ಲಿ ರಾಜ್ಯದ ವ್ಯಾಪ್ತಿಯಲ್ಲಿ ಹಾಫ್ ಹೆಲ್ಕೆಟ್ ಬಳಕೆ, ತಯಾರಿಕೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡಡ್(ಬಿಐಎಸ್) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಕೆಟ್‌ಗಳನ್ನೇ ಧರಿಸಬೇಕು. ಕೇವಲ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಕಳಪೆ ಅಥವಾ ಹಾಫ್ ಹೆಲೈಟ್‌ಗಳನ್ನು ಧರಿಸುವುದರಿಂದ ಅಪಘಾತದ ವೇಳೆ ಗಂಭೀರ ತಲೆಪೆಟ್ಟು ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.ಕೇವಲ ವಾಹನ ಸವಾರರಿಗೆ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹಾಫ್ ಹೆಲ್ಕೆಟ್‌ಗಳನ್ನು ಉತ್ಪಾದಿಸುವ ಘಟಕಗಳು ಮತ್ತು ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಅನಧಿಕೃತವಾಗಿ ಇಂತಹ ಹೆಲ್ಕೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ರಾಜ್ಯ ಸಾರಿಗೆ ಇಲಾಖೆ ಸಜ್ಜಾಗಿದೆ.ಸರಕಾರದ ಆದೇಶವನ್ನು ಉಲ್ಲಂಘಿಸಿ ಹಾಫ್ ಹೆಳ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ದಂಡ ಹಾಗೂ ಕಾನೂನು ಕ್ರಮಗಳನ್ನು ಜರುಗಿಸಲಿದ್ದಾರೆ. ಸುರಕ್ಷಿತ ಸವಾರಿ ಮತ್ತು ಸುರಕ್ಷಿತ ಜೀವನಕ್ಕಾಗಿ ಸಾರ್ವಜನಿಕರು ಗುಣಮಟ್ಟದ ಹೆಲ್ಕೆಟ್ ಧರಿಸಿ ನಿಯಮಗಳನ್ನು ಪಾಲಿಸಬೇಕೆಂದು ಸಾರಿಗೆ ಇಲಾಖೆ ಮನವಿ ಮಾಡಿದೆ.

- Advertisement -

Related news

error: Content is protected !!