Thursday, October 8, 2026
spot_imgspot_img
spot_imgspot_img

ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ – ತಪ್ಪಿದ ಅನಾಹುತ

- Advertisement -
- Advertisement -

ಶಿವಮೊಗ್ಗ: ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು–ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿದ್ದ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬಸ್‌ ಸುಟ್ಟು ಕರಕಲಾಗಿದೆ.‌

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಚಾಲಕ, ಹಾಗೂ ಕ್ಲೀನರ್‌ ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಾಗರಕ್ಕೆ ತೆರಳುತ್ತಿದ್ದರು. ಹೆಚ್ಚಿನ ಪ್ರಯಾಣಿಕರಿದ್ದಿದ್ದರೆ ಅನಾಹುತ ಆಗುವ ಸಾಧ್ಯತೆ ಇತ್ತು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದು, ಆನಂದಪುರ ಠಾಣೆ ಪಿಎಸ್‌ಐ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!