- Advertisement -
- Advertisement -


ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸ್ನೇಹಿತರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೀದರ್ ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ ಜೋಶಿ (25) ಮತ್ತು ನಾಗೇಶ್ ಮಾಣಿಪ್ಪ ಅಣ್ಣಾ (24) ಸಾವನಪ್ಪಿದ ಇಬ್ಬರು ಸ್ನೇಹಿತರು ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಇಬ್ಬರು ಸ್ನೇಹಿತರು ಬೈಕ್‌ವೊಂದನ್ನು ಖರೀದಿಸಿ, ಬೀದರ್‌ಗೆ ಬರುತ್ತಿದ್ದರು. ಈ ವೇಳೆ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತೆಲಂಗಾಣ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಬೀದರ್ ಮೂಲದ ಯುವಕರು ಎಂದು ಗುರುತಿಸಿದ್ದಾರೆ. ಸಂಗಾರೆಡ್ಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
- Advertisement -








