Thursday, October 8, 2026
spot_imgspot_img
spot_imgspot_img

ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು..!

- Advertisement -
- Advertisement -

ಬೆಳ್ತಂಗಡಿ : ಅಡಿಕೆ ಕೊಯ್ಯುತ್ತಿದ್ದಾಗ ವಿದ್ಯುತ್‌ ತಂತಿಗೆ ದೋಟಿ ತಗುಲಿ ವಿದ್ಯುತ್ ಆಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಧರ್ಮಸ್ಥಳ ಗ್ರಾಮದ ಅಜಿಕುರಿಯ ನಝೀರ್(38) ಎಂದು ಗುರುತಿಸಲಾಗಿದೆ.

ಅ. 4 ರಂದು ನಝೀರ್ ತನ್ನ ಮನೆಯ ಸಮೀಪದ ಮರದಿಂದ ದೋಟಿ ಬಳಸಿ ಅಡಿಕೆ ಕೊಯ್ಲು ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ದೋಟಿ ತಗುಲಿ, ಅವರಿಗೆ ತೀವ್ರ ವಿದ್ಯುತ್ ಶಾಕ್‌ ಹೊಡೆದು ಗಂಭೀರ ಗಾಯಗಳಾಗಿದ್ದವು.

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಅ. 8 ರ ಗುರುವಾರ ಬೆಳಿಗ್ಗೆ ನಿಧನರಾದರು.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!