Friday, October 9, 2026
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಷ್ ರಾವ್‌ನನ್ನು ಮಾಫಿಸಾಕ್ಷಿಯಾಗಿ ಪರಿಗಣಿಸಿದ್ದನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ಎಸ್‌.ರಾವ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಗುರುವಾರ ವಜಾಗೊಳಿಸಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ವಿಚಾರಣಾ ನ್ಯಾಯಾಲಯದ ಆದೇಶಗಳನ್ನು ಎತ್ತಿಹಿಡಿದಿದೆ.

ವಿಚಾರಣಾ ನ್ಯಾಯಾಲಯವು ಮೂಲತಃ 14ನೇ ಆರೋಪಿಯಾದ ಪ್ರದೋಷನನ್ನು ಮಾಫಿಸಾಕ್ಷಿಯನ್ನಾಗಿ ಪರಿಗಣಿಸಿದ್ದನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಹಾಗೂ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಸವೋಚ್ಚ ನ್ಯಾಯಾಲಯವೂ ಈ ನಿರ್ಧಾರವನ್ನು ಎತ್ತಿ ಹಿಡಿದಿದೆ.ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಪ್ರದೋಷ್‌ನನ್ನು ಮಾಫಿಸಾಕ್ಷಿಯಾಗಿ ಪರಿಗಣಿಸಿದ್ದನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಿದ್ದರು. ಕೆಳ ನ್ಯಾಯಾಲಯಗಳ ಆದೇಶಗಳಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ತಿಳಿಸಿದ ಸರ್ವೋಚ್ಚ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತು.

ಬೆಂಗಳೂರಿನ ವಿಚಾರಣಾ ನ್ಯಾಯಾಲಯದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆಯನ್ನು ದಾಖಲಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.ವಿಚಾರಣೆಯ ವೇಳೆ ದರ್ಶನ್ ಪರ ವಕೀಲರು, ಪ್ರದೋಷ್‌ನನ್ನು ಮಾಫಿಸಾಕ್ಷಿಯನ್ನಾಗಿ ಪರಿಗಣಿಸುವಾಗ ನಿಗದಿತ ಪ್ರಕ್ರಿಯೆಗಳು ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಲಾಗಿಲ್ಲ ಎಂದು ವಾದಿಸಿದರು. ಆದರೆ ಈ ವಾದವನ್ನು ತಳ್ಳಿಹಾಕಿದ ಸರ್ವೋಚ್ಚ ನ್ಯಾಯಾಲಯವು ವಿಚಾರಣಾ ನ್ಯಾಯಾಲಯದಲ್ಲಿ ಪ್ರದೋಷ್‌ನನ್ನು ಪಾಟೀಸವಾಲಿಗೆ ಒಳಪಡಿಸಬಹುದು ಎಂದು ತಿಳಿಸಿತು.ವಾದ ಮಂಡನೆಗೆ ಹೆಚ್ಚಿನ ಸಮಯ ನೀಡಬೇಕೆಂಬ ಮನವಿಯನ್ನು ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯವು, ಈಗಾಗಲೇ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.

ಮೃತ ರೇಣುಕಾಸ್ವಾಮಿಯ ತಾಯಿಯೇ ಪ್ರತಿಕೂಲ ಸಾಕ್ಷಿಯಾಗಿ ತಿರುಗಿಬಿದ್ದಿರುವುದು ಸೇರಿದಂತೆ ವಿಚಾರಣೆಯಲ್ಲಿನ ಬೆಳವಣಿಗೆಗಳನ್ನು ಗಮನಕ್ಕೆ ತೆಗೆದುಕೊಂಡ ಸರ್ವೋಚ್ಚ ನ್ಯಾಯಾಲಯವು, ಈ ಪರಿಸ್ಥಿತಿಯಲ್ಲಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯ ಉಪಸ್ಥಿತಿ ಅನಿವಾರ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಸರ್ವೋಚ್ಚ ನ್ಯಾಯಾಲಯದ ಈ ತೀರ್ಪಿನಿಂದಾಗಿ ದರ್ಶನ ಮತ್ತು ಇತರ ಆರೋಪಿಗಳು ಉನ್ನತ ನ್ಯಾಯಾಲಯಗಳಲ್ಲಿ ಮಾಫಿಸಾಕ್ಷಿ ಸ್ಥಾನವನ್ನು ವಿರೋಧಿಸುವ ಬದಲು, ವಿಚಾರಣೆಯ ಸಮಯದಲ್ಲಿ ಪ್ರದೋಷನ ಸಾಕ್ಷ್ಯದ ಸತ್ಯಾಸತ್ಯತೆ ಮತ್ತು ವಿಶ್ವಾಸಾರ್ಹತೆಯನ್ನು ಪ್ರಶ್ನಿಸಬೇಕಾಗುತ್ತದೆ.

- Advertisement -

Related news

error: Content is protected !!