Friday, October 9, 2026
spot_imgspot_img
spot_imgspot_img

ಲೇಕ್ ಅಟಿಟ್ಲಾನ್‌ಗೆ ಅಪ್ಪಳಿಸಿದ ಹೆಲಿಕಾಪ್ಟರ್- ಐವರ ರಕ್ಷಣೆ, ಪೈಲಟ್ ಸೇರಿ ಇಬ್ಬರು ನಾಪತ್ತೆ

- Advertisement -
- Advertisement -

ವಾಷಿಂಗ್ಟನ್‌: ಅಮೆರಿಕದ ಗ್ವಾಟೆಮಾಲಾದ ಲೇಕ್ ಅಟಿಟ್ಲಾನ್ ಸರೋವರಕ್ಕೆ ಹೆಲಿಕಾಪ್ಟರ್‌ ಅಪ್ಪಳಿಸಿದ್ದು, ಅದರಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ. ಉಳಿದ ಐವರನ್ನು ರಕ್ಷಿಸಲಾಗಿದೆ.

ಮಳೆಯ ವಾತಾವರಣದ ನಡುವೆ ಹೆಲಿಕಾಪ್ಟರ್‌ ಸಂಚರಿಸುತ್ತಿದ್ದ ವೇಳೆ ಹೆಲಿಕಾಪ್ಟರ್‌ ಇದ್ದಕ್ಕಿದ್ದಂತೆ ಸರೋವರಕ್ಕೆ ಅಪ್ಪಳಿಸಿದೆ. ಇದರಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಐವರನ್ನು ರಕ್ಷಿಸಲಾಗಿದೆ. ಪೈಲಟ್‌ ಹಾಗೂ ಓರ್ವ ಪ್ರಯಾಣಿಕ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಹೆಲಿಕಾಪ್ಟರ್ ಪತನಗೊಳ್ಳುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನಾಪತ್ತೆಯಾದವರ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಹೆಲಿಕಾಪ್ಟರ್ ಸ್ಥಳೀಯ ಸಮಯ ಮಧ್ಯಾಹ್ನ 12:11ಕ್ಕೆ ಲಾ ಅರೋರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, ಅಟಿಟ್ಲಾನ್ ಸರೋವರದ ಉತ್ತರ ಭಾಗದಲ್ಲಿರುವ ಹೋಟೆಲ್‌ನತ್ತ ಪ್ರಯಾಣ ಬೆಳೆಸಿತ್ತು. ಇದು 30 ನಿಮಿಷಗಳ ಪ್ರಯಾಣವಾಗಿತ್ತು ಎಂದು ಗ್ವಾಟೆಮಾಲಾ ನಾಗರಿಕ ವಾಯುಯಾನ ನಿರ್ದೇಶನಾಲಯ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!