- Advertisement -
- Advertisement -

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳ ಕುರಿತು ಸ್ವೀಕೃತವಾದ ದೂರು ಅರ್ಜಿಗಳ ಪರಿಶೀಲನೆ ಅ.16ರಂದು ಪೂರ್ವಾಹ್ನ 11 ಗಂಟೆಗೆ ದೇವಸ್ಥಾನದಲ್ಲಿ ನಡೆಯಲಿದೆ.ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ದೇವಸ್ಥಾನಕ್ಕೆ ಖುದ್ದು ಭೇಟಿ ನೀಡಿ ದೂರುಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ದೂರುದಾರರು ಹಾಜರಿದ್ದು, ದೂರಿಗೆ ಸಂಬಂಧಿಸಿದ ಲಿಖಿತ ಹೇಳಿಕೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ದೇವಸ್ಥಾನದ ಕಾಮಗಾರಿಗಳ ಕುರಿತು ಸ್ವೀಕೃತವಾದ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾರಿಯವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸೆ.25ರಂದು ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಅಂದು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ವಿಚಾರಣೆಯನ್ನು ಅ.16ಕ್ಕೆ ಮರುನಿಗದಿಪಡಿಸಲಾಗಿದೆ.
- Advertisement -








