- Advertisement -
- Advertisement -


ಶಿವಮೊಗ್ಗ: 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 22 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.10 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.ನಗರದ ಪ್ರದೇಶವೊಂದರಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿ ತೀರ್ಥನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಬಿ. ಅವರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,10,000 ರೂ. ದಂಡ ವಿಧಿಸಿ, ಸಂತ್ರಸ್ತ ಬಾಲಕಿಗೆ 5,00,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
- Advertisement -








