Friday, July 24, 2026
spot_imgspot_img
spot_imgspot_img

ಸುಳ್ಯ: ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

- Advertisement -
- Advertisement -

ಸುಳ್ಯ: ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಸುಳ್ಯ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಳ್ಯ ಕೊಶಮಟ್ಟಂ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾನ ಎಂಬ ಯುವಕ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದನು.

ಯುವಕನ ಮನೆಯವರು ಕಾಣೆಯಾದ ದಿನದಂದು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತದನಂತರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದರೂ ಕೂಡ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಇದ್ದು ಕಾಣೆಯಾದ ದಿನದಂದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೇಲಿನಿಂದ ಗೋಚರಿಸುತ್ತಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!