Monday, October 12, 2026
spot_imgspot_img
spot_imgspot_img

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪ; ಪತಿ ಬಂಧನ

- Advertisement -
- Advertisement -

ಮಂಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.ಅ.12ರಂದು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಪ್ಪ (40) ಎಂಬಾತ ತನ್ನ ಪತ್ನಿ ಸೋನಾಲಿ ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 103(2) ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪನನ್ನು ಅ.12ರಂದು ಕಾವೂರು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!