- Advertisement -
- Advertisement -


ಮಂಗಳೂರು: ರೌಡಿಶೀಟರ್ ಗೌರಿ ಅಲಿಯಾಸ್ ಗೌರೀಶ್ ಪೂಜಾರಿ (35) ಅವರು ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೌರೀಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗೌರೀಶ್, ಇತ್ತೀಚಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳನ್ನು ಬಿಟ್ಟು ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
- Advertisement -








