Tuesday, October 13, 2026
spot_imgspot_img
spot_imgspot_img

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ

- Advertisement -
- Advertisement -

ವಾಷಿಂಗ್ಟನ್ : ಅಮೆರಿಕದ ಜನಪ್ರಿಯ ಟಿವಿ ಸರಣಿ ‘ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್ ವೈಟ್ ಜೂನಿಯರ್ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟ ಆರ್‌ಜೆ ಮಿಟ್ಟೆ(34) ಅವರು ಅಮೆರಿಕದ ಟೆಕ್ಸಾಸ್‌ನ ಬ್ರೌನ್ಸ್ವಿಲ್ಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಆರ್‌ಜೆ ಮಿಟ್ಟೆ ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ನಟನ ನಿಧನದ ಸುದ್ದಿಯನ್ನು ಅವರ ಪ್ರತಿನಿಧಿ ಸೀನ್ ರೀಲಿ ಖಚಿತಪಡಿಸಿದ್ದು, ಮಿಟ್ಟೆ ಅವರು ತಮ್ಮ ಅಭಿನಯದ ಜೊತೆಗೆ ಸಮಾಜಸೇವೆಯಲ್ಲಿಯೂ ಗುರುತಿಸಿಕೊಂಡಿದ್ದರು. ಅವರ ಅಭಿನಯವು ಅಂಗವಿಕಲರ ಪ್ರಾತಿನಿಧ್ಯ ಮತ್ತು ಸಮಾನ ಅವಕಾಶಗಳ ಕುರಿತು ಚರ್ಚೆ ಹೆಚ್ಚಿಸಲು ನೆರವಾಯಿತು. ಅಂಗವಿಕಲರ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಅವರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತೆ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ತಿಳಿಸಿದ್ದಾರೆ.

ಆರ್‌ಜೆ ಮಿಟ್ಟೆ ಅವರು ಸೆರೆಬ್ರಲ್ ಪಾಲ್ಸಿ ಎಂಬ ನರಮಂಡಲಕ್ಕೆ ಸಂಬಂಧಿಸಿದ ಸ್ಥಿತಿಯನ್ನು ಎದುರಿಸುತ್ತಿದ್ದರು. ಅವರು ಯುನೈಟೆಡ್ ಸೆರೆಬ್ರಲ್ ಪಾಲ್ಸಿ ಮತ್ತು ಶ್ರೈನರ್ಸ್ ಚಿಲ್ಡ್ರನ್ಸ್ ಸಂಸ್ಥೆಗಳ ರಾಯಭಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಸಮಾಜಸೇವೆ ಹಾಗೂ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಲು ‘ದಿ ಮಿಟ್ಟೆ ಫೌಂಡೇಶನ್’ ಎಂಬ ಸಂಸ್ಥೆಯನ್ನೂ ಸ್ಥಾಪಿಸಿದ್ದರು. ಅವರು ಅಂಗವಿಕಲರ ಹಕ್ಕುಗಳು, ಜಾಗೃತಿ ಮತ್ತು ಸಮಾಜದಲ್ಲಿ ಅವರ ಪ್ರಾತಿನಿಧ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದರು.

2008ರಿಂದ 2013ರವರೆಗೆ ಅಮೆರಿಕದ ಎಎಂಸಿ ವಾಹಿನಿಯಲ್ಲಿ ಪ್ರಸಾರವಾದ ‘ಬ್ರೇಕಿಂಗ್ ಬ್ಯಾಡ್’ ಸರಣಿಯಲ್ಲಿ ಆರ್‌ಜೆ ಮಿಟ್ಟೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ವಾಲ್ಟರ್ ವೈಟ್ ಜೂನಿಯರ್ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ಅವರು, ತಮ್ಮ ಸಹಜ ಅಭಿನಯದಿಂದ ಮೆಚ್ಚುಗೆ ಗಳಿಸಿದ್ದರು. ಇನ್ನು ‘ಬ್ರೇಕಿಂಗ್ ಬ್ಯಾಡ್’ ಸರಣಿಯಲ್ಲಿನ ಅಭಿನಯಕ್ಕಾಗಿ 2014ರಲ್ಲಿ ಅವರು ಸ್ಕ್ರೀನ್ ಆಕ್ಟರ್ಸ್ ಗಿಲ್ಡ್ ಪ್ರಶಸ್ತಿ ಗಳಿಸಿದ್ದರು.

ನಟ, ಸಮಾಜಸೇವಕ ಹಾಗೂ ಅಂಗವಿಕಲರ ಹಕ್ಕುಗಳ ಪರವಾಗಿ ಧ್ವನಿ ಎತ್ತುತ್ತಿದ್ದ ಆರ್‌ಜೆ ಮಿಟ್ಟೆ ಅವರ ನಿಧನಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!