Wednesday, October 14, 2026
spot_imgspot_img
spot_imgspot_img

ಜೈಲಿನಲ್ಲಿ ನೆಮ್ಮದಿ ಇಲ್ಲ, ನ್ಯಾಯಾಧೀಶರೇ ಬಂದು ನೋಡಿ – ಪವಿತ್ರಾಗೌಡ ಮನವಿ

- Advertisement -
- Advertisement -

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಪವಿತ್ರಾಗೌಡ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಒಂದೇ ಬ್ಯಾರಕ್‌ನಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದು, ಮಧ್ಯರಾತ್ರಿವರೆಗೂ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ವಿದೇಶಿ ಪ್ರಜೆಗಳಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತಿದೆ ಎಂದು ಪವಿತ್ರಾಗೌಡ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಜೈಲಿನಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಪವಿತ್ರಾಗೌಡ, ಖುದ್ದು ನ್ಯಾಯಾಧೀಶರೇ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆ ಕೂಡ ಹಲವು ಬಾರಿ ಬ್ಯಾರಕ್ ಬದಲಾವಣೆ ಮಾಡುವಂತೆ ಪವಿತ್ರಾಗೌಡ ನ್ಯಾಯಾಧೀಶರನ್ನು ಕೋರಿದ್ದರು. ಆಗ ಜೈಲಿನ ಮ್ಯಾನ್ಯುಯಲ್ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪವಿತ್ರಾಗೌಡ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಜೈಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Related news

error: Content is protected !!