Wednesday, October 14, 2026
spot_imgspot_img
spot_imgspot_img

ಅ.16ರಿಂದ 20ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ

- Advertisement -
- Advertisement -

ಮಂಗಳೂರು, ಅ.14: ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡು ಕರಾವಳಿ ಕರ್ನಾಟಕದಲ್ಲಿ ಅ. 16ರಿಂದ 20ರವರೆಗೆ ಮಳೆಯಾಗುವ ಸಾಧ್ಯತೆ ಇರುವುದಾಗಿ ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅ. 15ರಿಂದ 20ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದ‌ರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿಯೂ ಅ.

16ರಿಂದ 20ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ

- Advertisement -

Related news

error: Content is protected !!