Thursday, October 15, 2026
spot_imgspot_img
spot_imgspot_img

ವಿಟ್ಲ: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ವಿಟ್ಲ: ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ಅ.ಕ್ರ: 110/2019, ಕಲಂ 457, 380 IPC ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ಎಂಬಾತನನ್ನು ಬಂಧಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ಎಎಸ್ಐ ಜಯರಾಮ ಹಾಗೂ ಸಿಪಿಸಿ 2462 ಶಿವಾನಂದ ರವರು ದಿನಾಂಕ 13-10-2026ರಂದು ಕೇರಳದ ನೀಲಂಬೂರು ವಂಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!