- Advertisement -
- Advertisement -

ಚಾಮರಾಜನಗರ : ಕಾರು ಮತ್ತು ಲಾರಿಯ ನಡುವೆ ನಡೆದ ಅಪಘಾತದಲ್ಲಿ ಗ್ರಾಮಾಡಳಿತಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ.



ಚಾಮರಾಜನಗರ – ಸಂತೇಮರಹಳ್ಳಿ ನಡುವಿನ ರಾಷ್ಟ್ರೀಯ ಹೆದಾರಿಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತವಾಗಿದ್ದು, ಕಾರಿನಲ್ಲಿದ್ದ ಗ್ರಾಮಾಡಳಿತಾಧಿಕಾರಿ ಮಹೇಶ್ (48) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ ಮಹೇಶ್ ಅವರು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮಾಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.
ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








