Monday, July 27, 2026
spot_imgspot_img
spot_imgspot_img

ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಧನ ವಿತರಿಸಿದ ಶಾಸಕ ಸಂಜೀವ ಮಠಂದೂರು

- Advertisement -
- Advertisement -

ವಿಟ್ಲ: ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಸುರೇಶ್ ಆಚಾರ್ಯ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ ಐದು ಲಕ್ಷ ರೂ. ಚೆಕ್ ಅನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮೃತರ ಕುಟುಂಬಕ್ಕೆ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು ರಾಜ್ಯ ಸರ್ಕಾರ ಪ್ರಾಕೃತಿಕ ವಿಕೋಪದಡಿಯಲ್ಲಿ ಪರಿಹಾರ ನೀಡಿದ್ದು, ಈ ಬಡ ಕುಟುಂಬಕ್ಕೆ ಇಂದು ಹಸ್ತಾಂತರ ಮಾಡಲಾಗಿದೆ. ಸುರೇಶ್ ಆಚಾರ್ಯ ಅವರ ಕುಟುಂಬ ತೀರಾ ಬಡಕುಟುಂಬವಾಗಿದ್ದು, ಮುಂದಿನ ದಿನಗಳಲ್ಲಿ ಅವರು ಕುಟುಂಬ ನಿರ್ವಹಣೆಗೆ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭ ಸಾಜಾ ರಾಧಾಕೃಷ್ಣ ಆಳ್ವ, ಪುತ್ತೂರು ಬಿಜೆಪಿ ಯುವ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಅರುಣ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ರವಿಪ್ರಕಾಶ್, ಶ್ರೀಕೃಷ್ಣ, ಇಂದಿರಾ ಅಡ್ಯಾಳಿ, ಪ್ರಮುಖರಾದ ಉದಯ ಆಲಂಗಾರು, ವೀರಪ್ಪ ಗೌಡ, ಹರೀಶ್ ಪೂಜಾರಿ ವಿಟ್ಲ, ವಿಟ್ಲ ಗ್ರಾಮ ಕರಣಿಕ ಪ್ರಕಾಶ್ ಉಪಸ್ಥಿತರಿದ್ದರು.

- Advertisement -

Related news

error: Content is protected !!