- Advertisement -
- Advertisement -



ಬೆಂಗಳೂರು: ಈ ವರ್ಷ ಭಾನುವಾರ ಸಹ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ವರ್ಷ ನವೆಂಬರ್ 1 ಕನ್ನಡ ರಾಜ್ಯೋತ್ಸವ ಭಾನುವಾರದ ದಿನ ಇರುವ ಹಿನ್ನೆಲೆ ಕಡ್ಡಾಯವಾಗಿ ಆಚರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳು ಹಾಗೂ ನಾಡ ಹಬ್ಬವಾದ ಕರ್ನಾಟಕ ರಾಜ್ಯೋತ್ಸವ ಮತ್ತು ಇತರೇ ಪ್ರಮುಖ ಜಯಂತಿಗಳನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನಿಯಮಾನುಸಾರ ಕಡ್ಡಾಯವಾಗಿ ಆಯಾ ದಿನಗಳಂದು ಗೌರಪೂರ್ವಕವಾಗಿ ಆಚರಣೆ ಮಾಡಲು ತಿಳಿಸಲಾಗಿದೆ.
ಈ ಬಾರಿ ರಾಜ್ಯಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1 ರ ಭಾನುವಾರ ಕಡ್ಡಾಯವಾಗಿ ಆಚರಣೆ ಮಾಡುವಂತೆ ಆದೇಶದಲ್ಲಿ ತಿಳಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
- Advertisement -








