Sunday, October 18, 2026
spot_imgspot_img
spot_imgspot_img

ಪ್ರಾರ್ಥನೆಗೆ ಬಂದ ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ – ಮಂಗಳೂರು ಚರ್ಚ್ ಪಾದ್ರಿ ಬಂಧನ

- Advertisement -
- Advertisement -

ಮಂಗಳೂರು: ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಚರ್ಚ್ ಪಾದ್ರಿಯನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದಾರೆ.

ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ. ಈತ ಪ್ರಾರ್ಥನೆಗೆ ಹೋದ ಸಂಧರ್ಭದಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಇಬ್ಬರು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದರು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.

ಸಕಲೇಶಪುರದ ಸಂಬಂಧಿ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಈತನಿಗಾಗಿ ಬೆಂಗಳೂರಿನ ಹಲವೆಡೆ ಪೊಲೀಸರು ಹುಡುಕಾಟ ನಡೆಸಿದ್ದರು. ಆರೋಪಿ ಚರ್ಚ್‌ಗೆ ಬರುವ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!