Sunday, October 18, 2026
spot_imgspot_img
spot_imgspot_img

ಹಣ ವಾಪಸ್ ಕೇಳಿದ್ದಕ್ಕೆ ಚೂರಿಯಿಂದ ಇರಿತ: ಆರೋಪಿ ವಶಕ್ಕೆ

- Advertisement -
- Advertisement -

ಬಂಟ್ವಾಳ: ಹಣ ವಾಪಸ್ ನೀಡುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಜಿತ್ ಕುಮಾರ್ ಶೆಟ್ಟಿ (28) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಅ.18ರಂದು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ಬಿ.ಮೂಡ ಗ್ರಾಮದ ಉದಯ್ ಎಂಬವರು ಆರೋಪಿಯಿಂದ ಹಣ ಪಡೆದಿದ್ದು, ವಾಪಸ್ ನೀಡುವಂತೆ ಕೇಳುತ್ತಿದ್ದರು. ಅ.17ರಂದು ರಾತ್ರಿ ಹಣ ಹಿಂದಿರುಗಿಸುವುದಾಗಿ ತಿಳಿಸಿದ ಆರೋಪಿ, ಉದಯ್ ಅವರನ್ನು ಪಲ್ಲಮಜಲಿಗೆ ಬರುವಂತೆ ತಿಳಿಸಿದ್ದಾನೆ.

ಅದರಂತೆ ಉದಯ್ ಪಲ್ಲಮಜಲು ಜಂಕ್ಷನ್‌ಗೆ ತೆರಳಿದ್ದು, ತನ್ನ ಸಹೋದರ ಲೋಕೇಶ್ (27) ಅವರನ್ನೂ ಸ್ಥಳಕ್ಕೆ ಬರುವಂತೆ ತಿಳಿಸಿದ್ದರು.ಲೋಕೇಶ್ ಸ್ಥಳಕ್ಕೆ ತಲುಪಿದಾಗ ಆರೋಪಿ ಅಜಿತ್ ಚೂರಿಯಿಂದ ಉದಯ್ ಅವರಿಗೆ ಇರಿಯುತ್ತಿರುವುದು ಕಂಡುಬಂದಿದೆ. ಈ ವೇಳೆ ತಡೆಯಲು ಮುಂದಾದ ಲೋಕೇಶ್ ಅವರನ್ನು ಆರೋಪಿ ಅಟ್ಟಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.ಬಳಿಕ ಸ್ಥಳೀಯರು ಗಾಯಾಳು ಉದಯ್ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಬಿಎನ್‌ಎಸ್ 2023ರ ಕಲಂ 118(2), 109(1), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!