Sunday, October 18, 2026
spot_imgspot_img
spot_imgspot_img

ಬೆಳ್ತಂಗಡಿ:ಕೊಕ್ಕಡದಲ್ಲಿ ಅಂಗಡಿ ವಿಚಾರವಾಗಿ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು

- Advertisement -
- Advertisement -


ಬೆಳ್ತಂಗಡಿ: ಕೊಕ್ಕಡದಲ್ಲಿ ಅಂಗಡಿ ವಿಚಾರಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಹಲ್ಲೆ ಹಾಗೂ ಹಾನಿ ಪ್ರಕರಣಗಳು ದಾಖಲಾಗಿವೆ.


ಅಕ್ಟೋಬರ್ 18ರಂದು ಬೆಳಿಗ್ಗೆ ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ರಾಘವ ಭಂಡಾರಿ ಹಾಗೂ ಅವರ ಕೆಲಸಗಾರರು ವ್ಯಾಪಾರ ಮಾಡುತ್ತಿದ್ದ ವೇಳೆ, ಈ ಹಿಂದೆ ಅಲ್ಲಿ ವ್ಯಾಪಾರ ನಡೆಸುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಏಕಾಏಕಿ ಅಂಗಡಿಗೆ ಪ್ರವೇಶಿಸಿ ಸುಮಾರು 25 ಸಾವಿರ ರೂ. ಮೌಲ್ಯದ ಕಟ್ಟಡ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ್ದಲ್ಲದೆ, ರಾಘವ ಭಂಡಾರಿ ಮತ್ತು ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೃಷ್ಣ ಭಟ್‌ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಅ.ಕ್ರ. 78/2026ರಂತೆ ಪ್ರಕರಣ ದಾಖಲಾಗಿದೆ.


ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಸೌತಡ್ಕ ದೇವಸ್ಥಾನದ ಬಳಿಯ ಅಂಗಡಿಯಲ್ಲಿ ಹರಿಶ್ಚಂದ್ರ ಅವರು ವ್ಯಾಪಾರ ಮಾಡುತ್ತಿದ್ದ ವೇಳೆ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್ ಹಾಗೂ ಚೇತನ್ ಎಂಬವರು ಅಂಗಡಿಗೆ ಅಕ್ರಮವಾಗಿ ಪ್ರವೇಶಿಸಿ ಸೊತ್ತುಗಳನ್ನು ಹೊರಗೆ ಎಸೆದು, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹರಿಶ್ಚಂದ್ರ ಅವರ ಪತ್ನಿ ಪ್ರತಿ ದೂರು ನೀಡಿದ್ದಾರೆ.

ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2026ರಂತೆ ಮತ್ತೊಂದು ಪ್ರಕರಣ ದಾಖಲಾಗಿದೆ.


ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!