Sunday, October 18, 2026
spot_imgspot_img
spot_imgspot_img

ಪುತ್ತೂರು ಲಾಡ್ಜ್‌ನಲ್ಲಿ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಘಟನೆ ಅ.17ರಂದು ರಾತ್ರಿ ನಡೆದಿದೆ.ಕಡಬ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು.

ಇವರು ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಲಾಡ್ಜ್‌ನಲ್ಲಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!