Monday, October 19, 2026
spot_imgspot_img
spot_imgspot_img

ಬಂಟ್ವಾಳ: ಕೋಳಿ ಅಂಕ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಓರ್ವ ವಶಕ್ಕೆ, 12 ಹುಂಜಗಳು ವಶ

- Advertisement -
- Advertisement -

ಬಂಟ್ವಾಳ: ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಯೊಂದಿಗೆ ಅ.18 ರಂದು ಸಂಜೆ ವೇಳೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಯುತ್ತಿರುವುದು ದೃಢಪಟ್ಟಿದ್ದು, ಪೊಲೀಸರನ್ನು ಕಂಡ ಕೂಡಲೇ ಜೂಜಾಟದಲ್ಲಿ ತೊಡಗಿದ್ದ ಹಲವರು ಪರಾರಿಯಾಗಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಬಂಟ್ವಾಳ ಬಿ ಮೂಡ ಗ್ರಾಮದ ಗಣೇಶ್(33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ ಜೂಜಾಟಕ್ಕೆ ಬಳಸುತ್ತಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುವ ಕತ್ತಿ ಮತ್ತು ನಗದು ರೂ. 1,100 ವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2026, ಕಲಂ: 87, 93 KPACT ಹಾಗೂ 11(1)(M)(ii), 11(1)(N) Prevention of Cruelty to Animals Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!