Monday, October 19, 2026
spot_imgspot_img
spot_imgspot_img

ಉಡುಪಿ: ಮಾದಕ ವಸ್ತು ಮಾರಾಟಕ್ಕೆ ಯತ್ನ – ಆರೋಪಿ ಬಂಧನ

- Advertisement -
- Advertisement -

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಉದ್ಯಾವರದ ಅಂಕುದ್ರು ನಿವಾಸಿ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂಬಾತ ಬಂಧಿತ ಆರೋಪಿ.

ಆರೋಪಿಯಿಂದ 17.66 ಗ್ರಾಂ ತೂಕದ ಎಂಡಿಎಂಎ ಎಂದು ಉಲ್ಲೇಖಿಸಲಾದ ಮಾದಕ ವಸ್ತು ಹೊಂದಿರುವ ಒಂಬತ್ತು ಜಿಪ್ ಕವರ್‌ಗಳು, 2.18 ಗ್ರಾಂ ತೂಕದ ಬಣ್ಣದ ಮಾತ್ರೆ ಹಾಗೂ ಪುಡಿ, ತೂಕದ ಯಂತ್ರ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್‌ ಸೇರಿದಂತೆ ವಿವಿಧ ವಸ್ತುಗಳು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 85 ಸಾವಿರ ರೂ. ಎಂದು ತಿಳಿದುಬಂದಿದೆ. ವಿಜಯ್ ವಿರುದ್ಧ ಈ ಹಿಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!