Monday, October 19, 2026
spot_imgspot_img
spot_imgspot_img

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ – ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳು ಅರೆಸ್ಟ್

- Advertisement -
- Advertisement -

ಮುಂಬೈ: ಜುಹು ಪ್ರದೇಶದಲ್ಲಿ ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗುಂಡಿನ ದಾಳಿ ಬಳಿಕ ತಲೆಮರೆಸಿಕೊಂಡಿದ್ದ 17, 18 ಹಾಗೂ 22 ವರ್ಷ ವಯಸ್ಸಿನ ಮೂವರು ಆರೋಪಿಗಳನ್ನು ‘ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್’ ಮತ್ತು ರಾಜಸ್ಥಾನ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮುಂಬೈನಿಂದ ದೆಹಲಿಯತ್ತ ರೈಲಿನಲ್ಲಿ(ರೈಲು ಸಂಖ್ಯೆ 12939) ಪ್ರಯಾಣಿಸುತ್ತಿದ್ದ ಈ ಆರೋಪಿಗಳನ್ನು ರಾಜಸ್ಥಾನದ ಕೋಟಾ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಯ ನಂತರ ಪರಾರಿಯಾಗಲು ಯತ್ನಿಸಿದ ಆರೋಪಿಗಳು, ವಸಾಯಿಯಲ್ಲಿ ರೈಲು ಹತ್ತಿದ್ದರು. ರೈಲು ಕೋಟಾ ನಿಲ್ದಾಣಕ್ಕೆ ಬಂದಾಗ ಈ ಮೂವರು ಆರೋಪಿಗಳನ್ನು ತಡೆಹಿಡಿದಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!