Monday, October 19, 2026
spot_imgspot_img
spot_imgspot_img

ಅ.20ರಿಂದ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅ.24ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನಲ್ಲಿ ಅ.24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ.

ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಾಗಲಕೋಟೆ ಹಾಗೂ ಕೊಪ್ಪಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!