Tuesday, October 20, 2026
spot_imgspot_img
spot_imgspot_img

ಕೊಣಾಜೆ: ಪಿಕಪ್ ಢಿಕ್ಕಿ: ಚಿಕಿತ್ಸೆಯಲ್ಲಿದ್ದ ಗಾಯಾಳು ಯುವಕ ಮೃತ್ಯು

- Advertisement -
- Advertisement -

ಕೊಣಾಜೆ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ.ಮೃತರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಹಾಗೂ ಕಿನ್ಯ ಉಕ್ಕುಡದ ಜುನೈದ್ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ಬಳಿಕ ಮೃತಪಟ್ಟಿದ್ದಾರೆ.ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಪಿಕಪ್ ಚಾಲಕ ವಾಹನ ನಿಲ್ಲಿಸಿ ಪರಾರಿಯಾಗಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!