Tuesday, October 20, 2026
spot_imgspot_img
spot_imgspot_img

ಮಂಗಳೂರು ದಸರಾ: ಮೆರವಣಿಗೆ ಹಿನ್ನೆಲೆ ಪರ್ಯಾಯ ಮಾರ್ಗ ಬಳಸಲು ಸೂಚನೆ

- Advertisement -
- Advertisement -

ಮಂಗಳೂರು: ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ದೇವರ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಅ.21 ಬುಧವಾರ ಸಂಜೆ 4 ಗಂಟೆಯಿಂದ ಅ.22 ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ಮೆರವಣಿಗೆ ನಡೆಯಲಿದೆ.

ಮೆರವಣಿಗೆ ಸಾಗುವ ಮಾರ್ಗ:
ಕುದ್ರೋಳಿ ದೇವಸ್ಥಾನದ ದ್ವಾರ – ಮಣ್ಣಗುಡ್ಡೆ ಜಂಕ್ಷನ್ – ನಾರಾಯಣ ಗುರು ವೃತ್ತ(ಲೇಡಿಹಿಲ್) – ಲಾಲ್‌ಬಾಗ್ – ಬಳ್ಳಾಲ್‌ಬಾಗ್ – ಪಿ.ವಿ.ಎಸ್ ಜಂಕ್ಷನ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆ – ಕೆ.ಬಿ ಕಟ್ಟೆ – ಕಾರ್ ಸ್ಟ್ರೀಟ್ – ನ್ಯೂ ಚಿತ್ರಾ ಜಂಕ್ಷನ್ ಬಳಿಕ ಕುದ್ರೋಳಿ ದ್ವಾರಕ್ಕೆ ಆಗಮಿಸಲಿದೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದಲೇ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಲಿದ್ದು, ಸಾರ್ವಜನಿಕರು ಮೆರವಣಿಗೆ ಮಾರ್ಗವನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಮೆರವಣಿಗೆ ಸಾಗುವ ರಸ್ತೆಯ ಬದಿಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ಪೊಲೀಸರು ಸೂಚಿಸಿದ್ದಾರೆ.

ಪಾರ್ಕಿಂಗ್ ವ್ಯವಸ್ಥೆ:
ದಸರಾ ವೀಕ್ಷಣೆಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಕರಾವಳಿ ಮೈದಾನ, ಅಳಕೆ ಮಾರ್ಕೆಟ್, ಉರ್ವ ಮಾರ್ಕೆಟ್ ಮೈದಾನ, ಉರ್ವ ಕೆನರಾ ಸ್ಕೂಲ್, ಕೆನರಾ ಡೊಂಗರಕೇರಿ ಸ್ಕೂಲ್, ಪೊಂಪೈ ಚರ್ಚ್, ದುರ್ಗಾಮಹಲ್ ಹೋಟೆಲ್, ಕುದ್ರೋಳಿ ನಾರಾಯಣ ಕಾಲೇಜು, ಬಿಇಎಂ ಸ್ಕೂಲ್, ಕಾರ್ ಸ್ಟ್ರೀಟ್ ಸರ್ಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆ ಮತ್ತು ಹೋಟೆಲ್ ವಿಮಲೇಶ್ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡುವಂತೆ ಸೂಚಿಸಲಾಗಿದೆ.

ಕುದ್ರೋಳಿ ದಸರಾ ಮೆರವಣಿಗೆಯ ಸಮಯ ವಾಹನ ಸಂಚಾರದ ಮಾರ್ಗದ ವಿವರ:

  • *ಕೊಟ್ಟಾರ ಚೌಕಿ ಜಂಕ್ಷನ್‌ನಿಂದ ಲೇಡಿಹಿಲ್ ಮುಖಾಂತರ ಮಂಗಳೂರು ನಗರಕ್ಕೆ ಬರುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗವಾದ ಕುಂಟಿಕಾನ- ಕೆಪಿಟಿ – ನಂತೂರು ಮುಖೇನ ಮಂಗಳೂರು ನಗರಕ್ಕೆ ಸಂಚರಿಸುವುದು.
  • *ಬಂಟ್ಸ್ ಹಾಸ್ಟೆಲ್ ನಿಂದ ಪಿವಿಎಸ್ ಮುಖಾಂತರ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ -ಬಟ್ಟಗುಡ್ಡೆ -ಕೆಪಿಟಿ ಮುಖೇನ ಅಥವಾ ಬಂಟ್ಸ್ ಹಾಸ್ಟೆಲ್- ಭಾರತ್ ಬೀಡಿ-ಮಲ್ಲಿಕಟ್ಟೆ ಮಾರ್ಗವಾಗಿ ಸಂಚರಿಸುವುದು.
  • *ಕೆ.ಎಸ್.ಆರ್.ಟಿ.ಸಿ ಜಂಕ್ಷನ್ ನಿಂದ ಲಾಲ್ ಬಾಗ್ ಕಡೆಗೆ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ ಜಂಕ್ಷನ್ – ಕಾಪಿಕಾಡ್- ಕುಂಟಿಕಾನ ಮೂಲಕ ಅಥವಾ ಕೆ.ಎಸ್.ಆರ್.ಟಿ.ಸಿ ಜಂಕ್ಷನ್ -ಬಿಜೈ ಬಟ್ಟಗುಡ್ಡೆ ಮಾರ್ಗವಾಗಿ ಸಂಚರಿಸುವುದು.
  • *ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕೆ.ಎಸ್.ಆರ್.ಟಿ.ಸಿ ಜಂಕ್ಷನ್ ನಿಂದ – ಕಾಪಿಕಾಡ್- ಕುಂಟಿಕಾನ ಮೂಲಕ ಅಥವಾ ಬಿಜೈ ಬಟ್ಟಗುಡ್ಡೆ ಮೂಲಕ ಸಂಚರಿಸುವುದು.
  • *ಹಂಪನಕಟ್ಟೆ ಕಡೆಯಿಂದ ಕೆ.ಎಸ್.ಆರ್ ರಸ್ತೆ- ನವಭಾರತ್ ವೃತ್ತದ ಮೂಲಕ ಪಿವಿಎಸ್ ಜಂಕ್ಷನ್ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಹಂಪನಕಟ್ಟೆ- ಎಲ್.ಹೆಚ್.ಹೆಚ್ – ಅಂಬೇಡ್ಕರ್‍ ಜಂಕ್ಷನ್ ಮೂಲಕ ಸಂಚರಿಸುವುದು.
  • *ನ್ಯೂ ಚಿತ್ರಾ ಜಂಕ್ಷನ್‌ನಿಂದ ನವಭಾರತ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
  • *ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಮಣ್ಣಗುಡ್ಡೆ ಜಂಕ್ಷನ್ -ದುರ್ಗಾ ಮಹಲ್-ಕುದ್ರೋಳಿ ದೇವಸ್ಥಾನ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
- Advertisement -

Related news

error: Content is protected !!