Tuesday, October 20, 2026
spot_imgspot_img
spot_imgspot_img

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಸ್ನೇಹಿತರೊಂದಿಗೆ ನದಿಗೆ ಸ್ನಾನಕ್ಕಿಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ಅ.20ರಂದು ಮಧ್ಯಾಹ್ನ ನಡೆದಿದೆ.

ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ್ ಗೌಡ ಎಂಬವರ ಪುತ್ರ ಕೀರ್ತನ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕೀರ್ತನ್ ಹಾಗೂ ಅವರ ಸ್ನೇಹಿತರು ಮಧ್ಯಾಹ್ನ ಸ್ನಾನಕ್ಕಾಗಿ ನಿಡ್ಲೆ ಗ್ರಾಮದ ಪಾರ್ಪಿಕಲ್ಲಿಗೆ ಹೋಗಿದ್ದರು.ನದಿಗೆ ಇಳಿದು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ನೀರಿನ ಆಳದ ಅರಿವಿಲ್ಲದೆ ಕೀರ್ತನ್ ಮುಳುಗಿ ಮೃತಪಟ್ಟಿದ್ದಾರೆನ್ನಲಾಗಿದೆ.

ಕೂಡಲೇ ಸ್ಥಳೀಯರು ಕೀರ್ತನ್ ಅವರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!