- Advertisement -
- Advertisement -


ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರಿನಂತೆ, ದೇವಸ್ಥಾನದ ಮಾಜಿ ಪದಾಧಿಕಾರಿ ಹಾಗೂ ಕೊಕ್ಕಡ ನಿವಾಸಿ ಕೃಷ್ಣ ಭಟ್ ಅವರು ಸಂಬಂಧಪಟ್ಟ ಇಲಾಖೆಗಳ ಅನುಮತಿ ಮತ್ತು ಅಧಿಕೃತ ದಾಖಲೆಗಳಿಲ್ಲದೆ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ. ಈ ಕಟ್ಟಡದಲ್ಲಿನ ಅಂಗಡಿಗಳಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಅ.19ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
- Advertisement -








