Wednesday, October 21, 2026
spot_imgspot_img
spot_imgspot_img

ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಚಿನ್ನದ ಸರ ಕಳವು: 24 ಗಂಟೆಯೊಳಗೆ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಮದುವೆ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ 3 ವರ್ಷ 6 ತಿಂಗಳ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿ, ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಅ.18ರಂದು ಕೊಡಿಯಾಲ್ ಬೈಲ್‌ನ ಟಿ.ಎಂ.ಎ. ಪೈ ಹಾಲ್‌ನಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಬಾಲಕಿಯ ಕುತ್ತಿಗೆಯಲ್ಲಿದ್ದ ಪೆಂಡೆಂಟ್ ಸಹಿತ ಸುಮಾರು 10 ಗ್ರಾಂ ತೂಕದ, ಅಂದಾಜು 1.35 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಮಹಿಳೆಯೊಬ್ಬರು ಎಳೆದುಕೊಂಡು ಪರಾರಿಯಾಗಿದ್ದರು.ಈ ಬಗ್ಗೆ ಶೀಮಾಬಾನು ನೀಡಿದ ದೂರಿನಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ, ಅ.19ರಂದು ಉಳ್ಳಾಲದ ಮಿನ್ನತ್ (42) ಎಂಬಾಕೆಯನ್ನು ವಶಕ್ಕೆ ಪಡೆದು, ಕಳವಾದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತೆಯನ್ನು ಅ.20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿತೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 3 ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಕಳವು ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಬಿಎನ್‌ಎಸ್ ಕಲಂ 112ರ ಅಡಿಯಲ್ಲಿ ಸಂಘಟಿತ ಅಪರಾಧದ ಆಯಾಮದಲ್ಲಿಯೂ ಮುಂದುವರಿಸಲಾಗಿದೆ.ಬರ್ಕೆ ಠಾಣೆಯ ಪಿಎಸ್‌ಐಗಳಾದ ಗುರುಪ್ಪ ಕಾಂತಿ, ವಿನಾಯಕ ತೋರಗಲ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!