Thursday, October 22, 2026
spot_imgspot_img
spot_imgspot_img

ಟೈಗರ್ ಶ್ರಾಫ್ ಮೇಲೆ ದಾಳಿ ಬೆನ್ನಲ್ಲೇ ಬಾಲಿವುಡ್‌ನಲ್ಲಿ ಬಿಷ್ಣೋಯ್ ಗ್ಯಾಂಗ್ ಭೀತಿ – ಬಾಲಿವುಡ್‌ ನಟರ ಮನೆಗಳಿಗೆ ಬಿಗಿ ಭದ್ರತೆ

- Advertisement -
- Advertisement -

ಮುಂಬೈ : ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ದಾಳಿಯ ಬೆನ್ನಲ್ಲೇ, ಬಾಲಿವುಡ್‌ನ ಹಲವು ಖ್ಯಾತ ನಟರ ನಿವಾಸಗಳಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ವರದಿಯಾಗಿದ್ದು, ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಶಾರುಖ್ ಖಾನ್ ಸೇರಿದಂತೆ ನಟಿ ದಿಶಾ ಪಟಾಣಿ ಹಾಗೂ ಇತರ ಗಣ್ಯರ ಭದ್ರತೆ ಕುರಿತು ಚರ್ಚೆ ತೀವ್ರಗೊಂಡಿದೆ.

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್‌ನ ಪ್ರಮುಖ ಗುರಿಗಳಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು ಎನ್ನಲಾಗುತ್ತಿರುವ ಹಿನ್ನೆಲೆ, ಅವರ ನಿವಾಸದ ಸುತ್ತ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಟೈಗರ್ ಶ್ರಾಫ್ ಮೇಲಿನ ದಾಳಿಯ ಬಳಿಕ ಸಲ್ಮಾನ್ ಖಾನ್ ಅವರಿಗೆ ವೈ-ಪ್ಲಸ್ ಭದ್ರತೆ ಒದಗಿಸಿರುವುದಾಗಿ ತಿಳಿದುಬಂದಿದೆ.

ಮುಂಬೈನಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದ್ದು, ಬುಲೆಟ್‌ಪ್ರೂಫ್ ರಕ್ಷಣಾ ವ್ಯವಸ್ಥೆಯ ನವೀಕರಣ ಕಾರ್ಯವೂ ನಡೆಯುತ್ತಿದೆ ಎನ್ನಲಾಗಿದೆ.

ನಟ ಅಕ್ಷಯ್ ಕುಮಾರ್ ಅವರ ಮನೆಯ ಹೊರಭಾಗದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಅಮಿತಾಭ್ ಬಚ್ಚನ್, ಅಮಿರ್ ಖಾನ್ ಸೇರಿದಂತೆ ಇತರ ಪ್ರಮುಖ ಬಾಲಿವುಡ್ ನಟರ ನಿವಾಸಗಳಿಗೂ ಹೆಚ್ಚುವರಿ ಭದ್ರತೆ ಕಲ್ಪಿಸುವ ಕುರಿತು ಮುಂಬೈ ಪೊಲೀಸ್ ಅಪರಾಧ ವಿಭಾಗದ ಮೂಲಗಳಿಂದ ತಿಳಿದುಬಂದಿದೆ.

ಮುಂಬೈ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಅಗತ್ಯಕ್ಕೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!