Friday, October 23, 2026
spot_imgspot_img
spot_imgspot_img

ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರದಲ್ಲಿ ಪಾರದರ್ಶಕತೆ ಕಡ್ಡಾಯ: ಯು.ಟಿ. ಖಾದರ್

- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯಿದೆಯಡಿ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಮತ್ತು ಔಷಧಗಳ ದರದಲ್ಲಿ ಪಾರದರ್ಶಕತೆ ಕಾಪಾಡಬೇಕು. ಕ್ಯಾನ್ಸರ್ ಔಷಧಗಳ ಹೆಚ್ಚಿನ ದರದ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಬೆಲೆ ನಿಯಂತ್ರಣದ ಹೊರಗಿರುವ ಕ್ಯಾನ್ಸರ್ ಔಷಧಗಳ ವ್ಯಾಪಾರ ಲಾಭಾಂಶವನ್ನು ಎಂಆರ್‌ಪಿಯ ಶೇ.30ಕ್ಕೆ ಮಿತಿಗೊಳಿಸಲಾಗಿದೆ. ಹೃದಯ ಮತ್ತು ಮೂತ್ರಪಿಂಡ ಚಿಕಿತ್ಸೆಗಳ ಔಷಧಗಳ ದರವನ್ನೂ ಸರಕಾರ ಪರಿಶೀಲಿಸುತ್ತಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಬಾಕಿ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಮೃತದೇಹವನ್ನು ತಡೆಹಿಡಿಯುವಂತಿಲ್ಲ. ಈ ಬಗ್ಗೆ ಸ್ಪಷ್ಟ ನೀತಿ ರೂಪಿಸಲಾಗುವುದು. ಆರೋಗ್ಯ ವಿಮೆ ಹೊಂದಿರುವ ರೋಗಿಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವುದನ್ನು ತಡೆಯಲು ಹಾಗೂ ಕ್ಲೇಮ್ ಪ್ರಕ್ರಿಯೆ ಸರಳಗೊಳಿಸಲು ವಿಮಾ ಕಂಪನಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.ಖಾಸಗಿ ಆಸ್ಪತ್ರೆಗಳು ಎದುರಿಸುತ್ತಿರುವ ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕೆಪಿಎಂಇ ಕಾಯಿದೆಯ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಖಾದರ್ ಹೇಳಿದರು.

- Advertisement -

Related news

error: Content is protected !!