- Advertisement -
- Advertisement -



ಬೆಳ್ತಂಗಡಿ: 14 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ.
ಅ.23ರಂದು ಸಂಜೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಮತ್ತು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಡಿಎನ್ಎ ಪರೀಕ್ಷೆ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಕುಸುಮಾವತಿ ಅವರನ್ನು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ ಇದೀಗ ಸೌಜನ್ಯ ಪ್ರಕರಣದ ಮರು ತನಿಖೆಯನ್ನು ಚುರುಕುಗೊಳಿಸಿದೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.
- Advertisement -








