Saturday, October 24, 2026
spot_imgspot_img
spot_imgspot_img

ಬಂಟ್ವಾಳ: ಪತ್ನಿಯನ್ನೇ ಹಲ್ಲೆ ನಡೆಸಿ ಕೊಲೆಗೈದ ಆರೋಪ – ಪತಿ ವಶಕ್ಕೆ

- Advertisement -
- Advertisement -

ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಅಥಣಿ ನಿವಾಸಿ ಅರುಣ್ ಮಹಾದೇವ್ ದೇಸಂಗಿ (26) ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಇವರ ಸಹೋದರಿ ಸುನೀತಾ ಮಹಾದೇವ್ ದೇಸಂಗಿ (34) ಅವರನ್ನು ಬಾಗಲಕೋಟೆ ಜಮಖಂಡಿ ನಿವಾಸಿ ಸಂಜೀವಕುಮಾರ್ (36) ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿ ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿ ವಾಸವಾಗಿದ್ದರು. ದಂಪತಿಗಳ ನಡುವೆ ವೈವಾಹಿಕ ಕಲಹ ನಡೆಯುತ್ತಿದ್ದು, ಸಂಬಂಧಿಕರು ರಾಜಿ ಸಂಧಾನ ಮಾಡಿದ್ದರು.ಹೆರಿಗೆಗಾಗಿ ತವರು ಮನೆಗೆ ಹೋಗಿದ್ದ ಸುನೀತಾ ಅವರನ್ನು ಆರೋಪಿ ಸಂಜೀವಕುಮಾರ್ ಅ.04 ರಂದು ಬಂಟ್ವಾಳದ ತನ್ನ ಮನೆಗೆ ಕರೆತಂದಿದ್ದ. ಅ.22 ರಂದು ಸುನೀತಾ ಅವರು ಸಹೋದರನಿಗೆ ಕರೆ ಮಾಡಿ, ಗಂಡ ಕಿರುಕುಳ ನೀಡಿ ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿದ್ದರು.

ಅ.23 ರಂದು ಮುಂಜಾನೆ ಆರೋಪಿ ಸಂಜೀವಕುಮಾರ್, ಪಿರ್ಯಾದಿದಾರರಿಗೆ ಕರೆ ಮಾಡಿ ಸುನೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ತಿಳಿಸಿದ್ದಾನೆ. ಪಿರ್ಯಾದಿದಾರರು ಬಂದು ನೋಡಿದಾಗ ಸುನೀತಾ ಮೃತಪಟ್ಟಿದ್ದು, ಮೃತದೇಹದ ಮೇಲೆ ಹಲ್ಲೆಯ ಗಾಯಗಳು ಹಾಗೂ ರಕ್ತ ಕಂಡುಬಂದಿದೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 142/2026, ಕಲಂ: 103 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿ ಸಂಜೀವಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!