Sunday, October 25, 2026
spot_imgspot_img
spot_imgspot_img

ಗೂನಡ್ಕದಲ್ಲಿ ಭೀಕರ ಅಪಘಾತ: ಮಗು ಮೃತ್ಯು ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ: ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಸಮೀಪದ ಗೂನಡ್ಕ ಶಾರದಾ ಶಾಲೆಯ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಅಕ್ಟೋಬರ್ 25ರಂದು ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಬಂಟ್ವಾಳ ತಾಲೂಕಿನ ಪುಣಚ ಮೂಲದವರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸ್ ಠಾಣೆಯ ಎಸ್‌ಐ ಉದಯಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!