Wednesday, June 17, 2026
spot_imgspot_img
spot_imgspot_img

ಉಡುಪಿ: ಪೊಲೀಸ್ ಹೆಸರಲ್ಲಿ ಮಹಿಳೆಯ ಚಿನ್ನಾಭರಣ ಲೂಟಿ !

- Advertisement -
- Advertisement -

ಉಡುಪಿ: ಪೊಲೀಸ್ ಎಂದು ನಂಬಿಸಿ ಮಹಿಳೆಯೊರ್ವರ ನಲ್ವತ್ತು ಸಾವಿರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಅಂಬಲಪಾಡಿ ಜಂಕ್ಷನ್ ಬಳಿ ರವಿವಾರ ಮಧ್ಯಾಹ್ನ ನಡೆದಿದೆ.

ಅಂಬಲಪಾಡಿಯ ವಸಂತಿ ಎಂಬವರು ಪ್ಲಾಟ್‌ವೊಂದರಲ್ಲಿ ಮನೆ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿರುವಾಗ ಶ್ಯಾಮಿಲಿ ಹಾಲ್‌ನ ವಾಹನ ಪಾರ್ಕಿಂಗ್ ಸ್ಥಳದ ಬಳಿ ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನಿಲ್ಲಿಸಿ, ವಸಂತಿಯವರನ್ನು ತಡೆದ ಇಬ್ಬರು, ನಾವು ಪೊಲೀಸ್‌ನವರು ಮುಂದೆ ಯಾರೋ ಹೆಂಗಸಿಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದುಕೊಂಡು ಹೋಗಿದ್ದಾರೆ ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ ಪೇಪರ್‌ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿ ಅವರು ಧರಿಸಿದ್ದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್‌ನ 2 ಚಿನ್ನದ ಬಳೆಗಳನ್ನು ಪಡೆದುಕೊಂಡು ಪೇಪರ್‌ನಲ್ಲಿ ಸುತ್ತಿ ಮಹಿಳೆಗೆ ನೀಡಿದ್ದರು.

ಸಂಶಯಗೊಂಡ ಮಹಿಳೆ ಅವರು ಕೊಟ್ಟ ವಸ್ತುವನ್ನು ನೋಡಿದಾಗ ಅದರಲ್ಲಿ ನಕಲಿ 5 ಬಳೆಗಳು ಇತ್ತು. ವಸಂತಿಯವರು ಮೋಸ ಹೋದ ಬಗ್ಗೆ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!