Tuesday, October 27, 2026
spot_imgspot_img
spot_imgspot_img

ಶಿವಮೊಗ್ಗ:ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್‌ನಿಂದ ಬಾಲಕ ಸಾವು

- Advertisement -
- Advertisement -

ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್‌ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ನಡೆದಿದೆ.

ಉಮರ್ ಫಾರುಕ್ (14) ಮೃತ ದುರ್ದೈವಿ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಟ್ಟೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಆತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆ ಸಾಗಿಸಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.

ಬಾಲಕನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಹಾಗೂ, ಸಹಪಾಠಿಗಳು ಸಹ ಬಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!