

ಮಂಗಳೂರು: ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯನ್ನು ಜಪ್ಪಿನಮೊಗರು ಪ್ರದೇಶದಿಂದ ಕೋಟೆಕಾರ್ ಗ್ರಾಮದ ಸಂಕೋಳಿಗೆಗೆ ಸ್ಥಳಾಂತರಿಸಲಾಗಿದ್ದು, ಸಾರ್ವಜನಿಕರು ಇನ್ನು ಮುಂದೆ ಹೊಸ ವಿಳಾಸವನ್ನು ಸಂಪರ್ಕಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


ಈ ಹಿಂದೆ ಜಪ್ಪಿನಮೊಗರು, ರಾಷ್ಟ್ರೀಯ ಹೆದ್ದಾರಿ-66ರ ಬಳಿಯ ವಾಹನ ಗ್ಯಾರೇಜ್ ಮಾಲಕರ ಸಂಘದ ಸಮೀಪದ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಠಾಣೆಯನ್ನು, ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ಹೊಸ ವಿಳಾಸ:ಡೋರ್ ನಂ. 5-78, ಪುಷ್ಪ ನಿವಾಸ, ಶ್ರೀ ಕೃಷ್ಣ ಕಲ್ಯಾಣ ಮಂಟಪದ ಎದುರುಗಡೆ, ಸಂಕೋಳಿಗೆ, ಕೋಟೆಕಾರ್ ಗ್ರಾಮ, ಉಳ್ಳಾಲ ತಾಲೂಕು – 575023.
ದೂರವಾಣಿ: 0824-2220850ಮೊಬೈಲ್: 9480805371ಗೂಗಲ್ ಮ್ಯಾಪ್ ಲೊಕೇಶನ್:https://maps.app.goo.gl/38Mscz54ZL6AHXfJ9
ಸಂಚಾರ ದಕ್ಷಿಣ ಪೊಲೀಸ್ ಠಾಣೆಗೆ ಸಂಬಂಧಿಸಿದ ದೂರುಗಳು ಹಾಗೂ ಇತರ ಪೊಲೀಸ್ ಸೇವೆಗಳಿಗಾಗಿ ಸಾರ್ವಜನಿಕರು ಮುಂದಿನ ದಿನಗಳಲ್ಲಿ ಹೊಸ ವಿಳಾಸವನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.








