Sunday, July 6, 2025
spot_imgspot_img
spot_imgspot_img

ಹಕ್ಕಿಜ್ವರದ ನಿಯಂತ್ರಣ ಕುರಿತು ಮೋದಿ ಸೂಚನೆ!

- Advertisement -
- Advertisement -

ನವದೆಹಲಿ: ಜನವರಿ 16 ರಿಂದ ಕೊರೊನಾ ಲಸಿಕೆಯನ್ನ ದೇಶಾದ್ಯಂತ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ರಾಜ್ಯಗಳ ಸಿಎಂ ಜತೆ ಸಭೆ ನಡೆಸಿದ್ದಾರೆ. ಇದೇ ವೇಳೆ ಮೋದಿ ದೇಶದ ಅನೇಕ ಕಡೆಗಳಲ್ಲಿ ಆತಂಕ ಸೃಷ್ಟಿಸಿರುವ ಹಕ್ಕಿಜ್ವರದ ನಿಯಂತ್ರಣ ಕುರಿತು ಸೂಚನೆ ನೀಡಿದ್ದಾರೆ.

ದೇಶದಲ್ಲಿ ಈಗಾಗಲೇ ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಹರಿಯಾಣ, ಯುಪಿ, ದೆಹಲಿ ಮತ್ತು ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಪಕ್ಷಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೋಳಿ ಸಾಕಾಣಿಕೆ ಕೇಂದ್ರಗಳು, ಪ್ರಾಣಿ ಸಂಗ್ರಹಾಲಯಗಳು, ಜಲಮೂಲಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ ಎಂದಿದ್ದಾರೆ.

- Advertisement -

Related news

error: Content is protected !!