- Advertisement -
- Advertisement -
ವಿಟ್ಲ: ಬಾರ್ಬರಿಕ್ ಸೇನಾ ವತಿಯಿಂದ ನವೆಂಬರ್ 1ರಂದು ವಿಟ್ಲದ RMSA ಮಾದರಿ ಶಾಲೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಕಳೆದ ವರ್ಷ ನವೆಂಬರ್ 1ರಂದು ಬಾರ್ಬರಿಕ್ ಸೇನಾ ವತಿಯಿಂದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಈ ಬಾರಿ ಸಮಾಜಮುಖಿ ಸೇವೆಯ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಬಾರ್ಬರಿಕ್ ಸೇನಾ ವತಿಯಿಂದ, ಮನ್ವಿತ್ ಸುವರ್ಣ ಅವರ ಸ್ಮರಣಾರ್ಥವಾಗಿ ಆಯೋಜಿಸಲಾಗಿರುವ ಈ ಶಿಬಿರಕ್ಕೆ RMSA ಶಾಲೆ ಹಾಗೂ ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ, ಮಂಗಳೂರು ಸಹಯೋಗ ನೀಡುತ್ತಿವೆ.
ನವೆಂಬರ್ 1ರ ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದೆ. ರಕ್ತದಾನದ ಮೂಲಕ ಅಮೂಲ್ಯ ಜೀವಗಳನ್ನು ಉಳಿಸುವ ಸದುದ್ದೇಶದಿಂದ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.
- Advertisement -








