Thursday, October 29, 2026
spot_imgspot_img
spot_imgspot_img

ಕಡಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

- Advertisement -
- Advertisement -

ಪುತ್ತೂರು: ಕಡಬ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕೊಂಡೊಯ್ದು ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು) 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಕಡಬ ಠಾಣಾ ಅ.ಕ್ರ 208/18, ಕಲಂ 376(2)(i), 506 IPC ಮತ್ತು ಕಲಂ 5(l), 6 POCSO Act ಅಡಿ ಪುತ್ತೂರು ನೆಲ್ಯಾಡಿ ನಿವಾಸಿ ರವಿ @ ರವೀಂದ್ರ ಆಚಾರ್ಯ (32) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು.ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ರವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಶಿಕ್ಷೆ ಪ್ರಕಟಿಸಿದ್ದಾರೆ.

POCSO ಕಾಯ್ದೆ 2012 ಸೆಕ್ಷನ್ 5(l) ಮತ್ತು 6 ರ ಅಡಿ: 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. 25,000 ದಂಡ. ದಂಡ ಪಾವತಿಸಲು ವಿಫಲವಾದರೆ 1 ವರ್ಷದ ಹೆಚ್ಚುವರಿ ಜೈಲು ಶಿಕ್ಷೆ

.IPC ಸೆಕ್ಷನ್ 506 ರ ಅಡಿ: 1 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ರೂ. 25,000 ದಂಡ. ದಂಡ ಪಾವತಿಸಲು ವಿಫಲವಾದರೆ 1 ವರ್ಷದ ಜೈಲು ಶಿಕ್ಷೆ.

ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ ಎಂದು ನ್ಯಾಯಾಲಯ ಆದೇಶಿಸಿದೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಪಂತ್ತಾಯ ರವರು ವಾದ ಮಂಡಿಸಿದ್ದರು.

- Advertisement -

Related news

error: Content is protected !!