Saturday, October 3, 2026
spot_imgspot_img
spot_imgspot_img

ಪುತ್ತೂರು: ಕೆಎಸ್‌ಆರ್‌ಟಿಸಿ ನಿರ್ವಾಹಕ ಆತ್ಮಹತ್ಯೆಗೆ ಯತ್ನ!

- Advertisement -
- Advertisement -

ಪುತ್ತೂರು: ಮೇಲಧಿಕಾರಿಗಳ ಕಾಟದಿಂದ ಬೇಸತ್ತು, ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರೊಬ್ಬರು ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಕಾಶಿಬೆಟ್ಟು ನಿವಾಸಿ ಕೆ. ನಾಗೇಶ್ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ನಿರ್ವಾಹಕ. ನಾಗೇಶ್ ಅವರು ಕೆಎಸ್‌ಆರ್‌ಟಿಸಿಯ ಬಿ.ಸಿ.ರೋಡ್ ಡಿಪ್ಪೊದಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲಧಿಕಾರಿಗಳು ಅವರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಕರ್ತವ್ಯಕ್ಕೆ ಹಾಜರಾದಾಗ ಡ್ಯೂಟಿಗೆ ಸರಿಯಾಗಿ ನಿಯೋಜಿಸುತ್ತಿರಲಿಲ್ಲ. 5 ನಿಮಿಷ ತಡವಾದರೂ ನಿನಗೆ ಇಂದು ಕೆಲಸವಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ಜೊತೆಗೆ ಸಾರ್ವಜನಿಕವಾಗಿ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಡಿಸಿಗೆ ದೂರು ನೀಡಿದ ವೇಳೆ ಅಲ್ಲೂ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇದರಿಂದ ಬೇಸತ್ತು ಶೌಚಾಲಯಕ್ಕೆ ತೆರಳಿ ವಿಷ ಸೇವನೆ ಮಾಡಿದ್ದಾರೆ. ಇದಕ್ಕೆ ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ನಾಗೇಶ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಗೇಶ್ ಅವರ ಮನೆ ಮಂದಿ ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್ ಘಟಕದ ಟಿಐ ಗಣೇಶ್ ಪೈ ಮತ್ತು ಡಿಪ್ಪೊ ಮ್ಯಾನೇಜರ್ ಶ್ರೀಶ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ದಲಿತ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!