Saturday, October 31, 2026
spot_imgspot_img
spot_imgspot_img

ಕಡಬ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ನಿವಾಸಿ ವಿಶಾಲ್ ಪೊಂಕೆ (30) ಎಂದು ಗುರುತಿಸಲಾಗಿದೆ.

ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 110/16, 112/16, 113/16, 114/16 ಕಲಂ 457, 380 IPC ಅಡಿ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ದೊಡ್ಡಬಳ್ಳಾಪುರ ನಿವಾಸಿ ನರಸಿಂಹ @ ರಾಜು, ಮಹಾರಾಷ್ಟ್ರ ನಿವಾಸಿ ವಿಜಯ್ ಸುರೇಶ ಪೊಂಕೆ, ಮಹಾರಾಷ್ಟ್ರ ನಿವಾಸಿ ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡ ನಿವಾಸಿ ಚಂದ್ರಕಾಂತ್ ಪೂಜಾರಿ ಮತ್ತು ಮಂಡ್ಯ ನಿವಾಸಿ ಪ್ರಕಾಶ್ ಬಹದ್ದೂರ್ ಎಂಬವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ.

ಆದರೆ ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ವಿಶಾಲ್ ಪೊಂಕೆ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಪೊಲೀಸರು ಯತ್ನಿಸಿ ಆರೋಪಿ ವಿರುದ್ಧ ನ್ಯಾಯಾಲಯದಿಂದ PROCLAMATION ಹೊರಡಿಸಲಾಗಿತ್ತು.ಅಕ್ಟೋಬರ್ 30, 2026 ರಂದು ಆರೋಪಿ ನ್ಯಾಯಾಲಯಕ್ಕೆ ಹಾಜರಾಗಿದ್ದು, 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪುತ್ತೂರು (ಸಂಚಾರಿ ನ್ಯಾಯಾಲಯ-ಕಡಬ) ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿ ವಿಶಾಲ್ ಪೊಂಕೆ ವಿರುದ್ಧ ಕಡಬ ಠಾಣೆಯಲ್ಲಿ MOB ತೆರೆಯಲಾಗಿದ್ದು, ಈತನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 105/2016 ಕಲಂ 457, 380 IPC ಅಡಿ ಮತ್ತೊಂದು ಪ್ರಕರಣ ದಾಖಲಾಗಿ ವಿಚಾರಣೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!