Saturday, October 31, 2026
spot_imgspot_img
spot_imgspot_img

ಬಾಂಗ್ಲಾದೇಶಿಗರ ನುಸುಳುವಿಕೆ ಆರೋಪಕ್ಕೆ ಪ್ರಕಾಶ್‌ರಾಜ್ ತಿರುಗೇಟು: ಎಲ್ಲಿದ್ದಾರೆಂದು ತೋರಿಸಿ ಎಂದು ಸವಾಲು

- Advertisement -
- Advertisement -


ಮಂಗಳೂರು, ಅ.31: ಕರ್ನಾಟಕದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸುವವರು ಅವರಿರುವ ಸ್ಥಳವನ್ನು ತೋರಿಸಲಿ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್‌ರಾಜ್ ಬಹಿರಂಗ ಸವಾಲು ಹಾಕಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶಿಗರು ಮತ್ತು ಪಾಕಿಸ್ತಾನಿಯರು ಕರ್ನಾಟಕಕ್ಕೆ ಅಕ್ರಮವಾಗಿ ನುಸುಳಿದ್ದಾರೆ ಎಂಬ ಆರೋಪಗಳ ಕುರಿತು ಪ್ರಶ್ನೆ ಎತ್ತಿದರು.


ಲಕ್ಷಾಂತರ ಅಕ್ರಮ ವಲಸಿಗರು ರಾಜ್ಯದಲ್ಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಈ ಆರೋಪಗಳಿಗೆ ಪೂರಕವಾದ ದಾಖಲೆಗಳು ಎಲ್ಲಿವೆ? ನಿಜವಾಗಿಯೂ ಅಷ್ಟು ದೊಡ್ಡ ಸಂಖ್ಯೆಯಲ್ಲಿ ಅಕ್ರಮ ವಲಸಿಗರಿದ್ದರೆ ಅವರನ್ನು ಪತ್ತೆಹಚ್ಚಿ ತೋರಿಸಲಿ ಎಂದು ಸವಾಲು ಹಾಕಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಪ್ರಕ್ರಿಯೆಯಿಂದ ಲಕ್ಷಾಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದರು.


ಮತದಾರರ ಪಟ್ಟಿಯಲ್ಲಿನ ಲೋಪಗಳು, ಜೀವಂತ ವ್ಯಕ್ತಿಗಳನ್ನು ಮೃತಪಟ್ಟವರು ಎಂದು ಗುರುತಿಸಿರುವುದು ಹಾಗೂ ಸ್ಥಳಾಂತರಗೊಂಡಿದ್ದಾರೆ ಎಂಬ ಕಾರಣಕ್ಕೆ ಹೆಸರುಗಳನ್ನು ಕೈಬಿಟ್ಟಿರುವುದರ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದರು.


ಜನರಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಭೀತಿ ಹುಟ್ಟಿಸುವ ಬದಲು, ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಕಾಶ್‌ರಾಜ್ ಒತ್ತಾಯಿಸಿದರು.

- Advertisement -

Related news

error: Content is protected !!